
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಪ್ರವಾಹ ಬರಬಹುದಾದ ಹಿನ್ನೆಲೆಯಲ್ಲಿ ಶಾಸಕ ಗಣೇಶ ಹುಕ್ಕೇರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಚಿಕ್ಕೋಡಿ ತಾಲೂಕಿನ ಕೃಷ್ಣಾನದಿ ತೀರದಲ್ಲಿ ಪ್ರವಾಹದ ಆತಂಕ ಉಂಟಾಗುತ್ತಿದೆ. ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬೆಳಗಾವಿ ಗಡಿ ಪ್ರದೇಶದಲ್ಲಿ ಮತ್ತು ಮಹಾರಾಷ್ಟ್ರದಲ್ಲಿಯೂ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪರಿಣಾಮ ಚಿಕ್ಕೋಡಿ ತಾಲೂಕಿನ ಕೃಷ್ಣಾನದಿಯ ವ್ಯಾಪ್ತಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ತಕ್ಷಣಕ್ಕೆ ಅಂತಹ ಆತಂಕವಿಲ್ಲ. ಪ್ರವಾಹ ಬಂದರೂ ಎದುರಿಸಲು ಎಲ್ಲ ಸಿದ್ಧತೆಗಳಾಗಿವೆ. ಹಾಗಾಗಿ ನದಿ ತೀರದ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಗಣೇಶ ಹುಕ್ಕೇರಿ ಧೈರ್ಯ ತುಂಬಿದರು.