
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು  – ಪ್ರತಿವರ್ಷ ಮಾರ್ಚ್ 3ರಂದು ವಿಶ್ವ ಕನ್ನಡ ಸಿನಿಮಾ ದಿನವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ಕನ್ನಡದ ಮೊದಲ ಟಾಕಿ ಚಿತ್ರ ಸತಿ ಸುಲೋಚನೆ ಮಾರ್ಚ್ 3ರಂದು ಬಿಡುಗಡೆಯಾಗಿದ್ದು, ಈ ದಿನವನ್ನ ‘ವಿಶ್ವ ಕನ್ನಡ ಸಿನಿಮಾ ದಿನ’ವೆಂದು ರಾಜ್ಯ ಸರ್ಕಾರ ಘೋಷಣೆ ಮಾಡುತ್ತಿದೆ.
13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕನ್ನಡ ಸಿನಿಮಾಗಳ ಬಗ್ಗೆ, ಕಪ್ಪು ಬಿಳುಪು ಚಿತ್ರಗಳ ಮಹತ್ವದ ಬಗ್ಗೆ ಮಾತನಾಡಿದರು. ಮತ್ತು ನಟ ಪುನೀತ್ ರಾಜ್ ಕುಮಾರ್ ಅವರಿಗೆ ದೊರೆತ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಶ್ರೀಘ್ರದಲ್ಲೇ ಪ್ರಧಾನ ಮಾಡಲಾಗುವುದು. ಈ ಕಾರ್ಯಕ್ರಮದ ದಿನಾಂಕವನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
 
					 
				 
					 
					 
					 
					
 
					


