ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ದೇಹದ ಅಂಗಾಂಗಗಳಲ್ಲಿ ಕಿಡ್ನಿಯೂ ಕೂಡ ಅನೇಕ ಕಾರ್ಯಗಳನ್ನು ನಿರ್ವಹಿಸುತ್ತದೆ. ಅದನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ಜೀವನರ‍್ಯಂತ ತೊಂದರೆ ಅನುಭವಿಸಬೇಕಾಗುತ್ತದೆ. ಕಿಡ್ನಿ ಆರೋಗ್ಯದ ಕುರಿತು ಸಾಮಾನ್ಯರಿಗೂ ತಿಳಿಯುವ ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ಅವಶ್ಯವಿರುವ ವೈದ್ಯಕೀಯ ಸೌಲಭ್ಯ, ಅಂಗಾಂಗ ದಾನದ ಕಾರ್ಯ ಹಾಗೂ ಕಸಿ ಶಸ್ತ್ರಚಿಕಿತ್ಸೆ ನೆರವೇರಿಸುವಲ್ಲಿ ಇನ್ನೂ ಹೆಚ್ಚಾಗಿ ಕಾರ್ಯಪ್ರವೃತ್ತರಾಗಬೇಕೆಂದು ಕೆಎಲ್‌ಇ ಅಕಾಡೆಮಿ ಆಫ್ ಹೈಯರ ಎಜ್ಯುಕೇಶನ್ ಆ್ಯಂಡ ರಿಸರ್ಚ(ಕಾಹೆರ)ನ ಉಪಕುಲಪತಿ ಡಾ. (ಪ್ರೊ) ನಿತಿನ್ ಗಂಗಾನೆ ಅವರಿಂದಿಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ನೆಫ್ರೊಲಾಜಿ ವಿಭಾಗವು ಇದೇ ದಿ. 9 ಮಾರ್ಚ 2023 ರಂದು ಏರ್ಪಡಿಸಲಾಗಿದ್ದ ವಿಶ್ವ ಮೂತ್ರಪಿಂಡ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವೈದ್ಯವಿಜ್ಞಾನ ಸಾಕಷ್ಟು ಮುಂದುವರೆದಿದ್ದರೂ ಕೂಡ ಕಿಡ್ನಿ ಹಾಳಾದರೆ ಡಯಾಲಿಸಿಸ್ ಅಥವಾ ಕಸಿ ಮಾಡುವದೊಂದೆ ಪರಿಹಾರ. ಅದರ ಕುರಿತು ಇನ್ನೂ ಹೆಚ್ಚಾಗಿ ಕಾರ‍್ಯಪ್ರವೃತ್ತರಾಗಿ ಕಿಡ್ನಿ ರೋಗಿಗಳ ತೊಂದರೆಯನ್ನು ತಪ್ಪಿಸಲು ಪ್ರಯತ್ನಿಸಬೇಕು. ರಕ್ತದೊತ್ತಡ, ಮಧುಮೇಹ, ಮೂತ್ರಪಿಂಡದಲ್ಲಿನ ಹರಳು ಹಾಗೂ ಮೂತ್ರನಾಳದ ಸೋಂಕು ತಗುಲದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕರ್ನಲ್ ಎಂ ದಯಾನಂದ ಅವರು ಮಾತನಾಡಿ, ಕಳೆದ 20 ವರ್ಷಗಳಲ್ಲಿ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ ಲಭಿಸುತ್ತಿದ್ದು, ಸಾಮಾನ್ಯರೊಂದಿಗೆ ಕಿಡ್ನಿ ಕಸಿ ಮಾಡಿಸಕೊಂಡ ರೋಗಿಗಳಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಿ. ಇನ್ನೂ ಹೆಚ್ಚಿನ ಸೌಲಭ್ಯ ಕಲ್ಪಿಸಲು ಅತ್ಯಾಧುನಿಕ ಸೌಲಭ್ಯಗಳನ್ನುಳ್ಳ ಡಾಯಾಲಿಸಿಸ ಯಂತ್ರ ಹಾಗೂ ಕಿಡ್ನಿ ಸಂಬಂಧಿತ ಸಕಲ ಚಿಕಿತ್ಸಾ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾಹೆರನ ಕುಲಸಚಿವರಾದ ಡಾ. ವಿ ಎ ಕೋಠಿವಾಲೆ, ಡಾ. ಮಲ್ಲಿಕಾರ್ಜುನ ಕರಿಶೆಟ್ಟಿ(ಖಾನಪೇಟ) ಅವರು ಮಾತನಾಡಿ, ನಾಲಿಗೆ ರುಚಿ ನೋಡಿದರೆ ಕಿಡ್ನಿ ಹಾಳಾಗುವ ಸಮಯ ಅಧಿಕ. ಬಿಪಿ, ಕೊಲೆಸ್ಟರಾಲ್, ಡಯಾಬಿಟಿಸ್ ಅನ್ನು ನಿಯಂತ್ರಣದಲ್ಲಿಡಿ, ವೈದ್ಯರ ಸಲಹೆ ಇಲ್ಲದೆ ಅನಾವಶ್ಯಕ ಔಷಧಿ ಸೇವನೆ ಬೇಡ, ಇದರಿಂದ ಕಿಡ್ನಿ ಹಾಳಾಗುವದನ್ನು ತಡೆಯಬಹುದು ಅಥವಾ ಮುಂದೂಡಬಹುದು. ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆಯಬೇಕು. ಸುಮಾರು 30 ವರ್ಷಗಳ ಕಾಲ ಡಯಾಲಿಸಿಸ್ ಮೇಲೆ ಇದ್ದು ಸಹಜವಾದ ಜೀವನ ನಡೆಸುತ್ತಿದ್ದಾರೆ ಎಂದರು.
ಇದಕ್ಕೂ ಮೊದಲು ನಗರದ ಶ್ರೀಕೃಷ್ಣದೇವರಾಯ (ಕೊಲ್ಹಾಪೂರ) ವೃತ್ತದಿಂದ ಆಸ್ಪತ್ರೆಯವರೆಗೆ ಕಿಡ್ನಿ ಆರೋಗ್ಯದ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಕಾಹೆರನ ಉಪಕುಲಪತಿ ಡಾ. ನಿತಿನ ಗಂಗಾನೆ ಅವರು ಜಾಥಾಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ಯಾನ್ಸರ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಮತ್ತು ಮುಖ್ಯಕರ‍್ಯನಿರ್ವಾಹಕರಾದ ಡಾ. ಎಂ ವಿ ಜಾಲಿ, ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಚರ‍್ಯರಾದ ಡಾ. ರಾಜೇಶ ಪವಾರ, ಡಾ. ರಿತೇಶ ವೆರ್ಣೆಕರ, ಡಾ. ರವಿ ಸರ‍್ವಿ, ಡಾ. ಎಸ್ ಐ ನೀಲಿ, ಡಾ. ಎಸ್ ಸಿ ಮೆಟಗುಡ್, ಶಕುಂತಲಾ ಕೋರೆ, ಅನಿಲ ಇಂಗಳೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಪ್ರಮೋದ ಸೂಳಿಕೇರಿ ನಿರೂಪಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ