
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025 ಪ್ರಯುಕ್ತ ನಗರದ ಶ್ರೀ ಎಸ್. ಜಿ. ಬಾಳೇಕುಂದ್ರಿ ಇಂಜಿನೀಯರಿಂಗ್ ಕಾಲೇಜು ಮೈದಾನದಲ್ಲಿ ಹಿರಿಯ ನಾಗರಿಕರಿಗಾಗಿ ಕ್ರೀಡಾ ಸ್ಪರ್ಧೆಗಳನ್ನು ಹಾಗೂ ಆಡಿಟೋರಿಯಂ ಹಾಲ್‌ದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.
ನಾಗನೂರ ಮಠ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಕ್ರೀಡಾಕೂಟವನ್ನು ಉದ್ಘಾಟಿಸಿ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಚೇತನಕುಮಾರ್.ಎಮ್.ಎನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ನಾಮದೇವ ಬೀಲ್ಕರ್, ಹಿರಿಯ ನಾಗರಿಕರ ಸಂಘಗಳ ಪದಾಧಿಕಾರಿಗಳಾದ ವೈ. ಎಂ. ಬೆಂಡಿಗೇರಿ, ಎಸ್.ಬಿ. ಸಿನ್ನಾಳ, ಮಹಾಂತೇಶ ಹಿರೇಮಠ, ವಿರುಪಾಕ್ಷಿ ಜಿ. ಹಿರೇಮಠ, ಹಾಗೂ ಹಿರಿಯ ನಾಗರಿಕರು ಮತ್ತು ಹಿರಿಯ ನಾಗರಿಕರಿಗಾಗಿ ಕಾರ್ಯ ನಿರ್ವಹಿಸುತ್ತಿರುವ ಹಲವಾರು ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.