Belagavi NewsBelgaum NewsKannada NewsKarnataka NewsNationalPolitics

*ಬೆಳಗಾವಿಯ ಬೆಳಗುಂದಿಯಲ್ಲಿ ತಲೆ ಎತ್ತಲಿದೆ ಕುಸ್ತಿ ಅಖಾಡ: ಬಜೇಟ್ ನಲ್ಲಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ಸರ್ಕಾರ  ಕ್ರೀಡಾ ಮೂಲಸೌಕರ್ಯ ವೃದ್ಧಿ ಹೊಸ ತರಬೇತಿ ಕೇಂದ್ರಗಳ ಸ್ಥಾಪನೆ ಮತ್ತು ರಾಜ್ಯಾದ್ಯಂತ ಮ್ಯಾರಥಾನ್‌ಗಳ ಆಯೋಜನೆ ಸೇರಿದಂತೆ ಹಲವು ಉಪಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.

ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರು, ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಕುಸ್ತಿ ಕ್ರೀಡೆಯನ್ನು ಉತ್ತೇಜಿಸಲು ಬೆಳಗಾವಿಯ ಬೆಳಗುಂದಿಯಲ್ಲಿ ಹೊಸ ಕುಸ್ತಿ ಅಖಾಡ ನಿರ್ಮಿಸಲು ನಿರ್ಧರಿಸಲಾಗಿದ್ದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ

‘ಸಶಕ್ತ ಕರ್ನಾಟಕ’ ಕಾರ್ಯಕ್ರಮದಡಿ ಬೆಳಗಾವಿ, ಗೋಕರ್ಣ, ಚಿತ್ರದುರ್ಗ ಮತ್ತು ಹಂಪಿಯಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್ ಸ್ಪರ್ಧೆಗಳು ಆಯೋಜಿಸಲಾಗುತ್ತದೆ. ಪ್ರತಿಯೊಂದು ಕಾರ್ಯಕ್ರಮಕ್ಕೂ ₹10 ಲಕ್ಷ ವೆಚ್ಚ ಮಾಡಲಾಗುತ್ತದೆ.

ಇದರ ಜೊತೆಗೆ ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪ್ರಸಿದ್ಧ ಕ್ರೀಡಾಪಟುಗಳ ಹೆಸರಿನಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್‌ಗಳನ್ನು ತಲಾ ₹4 ಲಕ್ಷ ವೆಚ್ಚದಲ್ಲಿ ಆಯೋಜಿಸಲಾಗುತ್ತದೆ.

Home add -Advt

ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು ಮೈಸೂರಿನ ದಟ್ಟಗಳ್ಳಿಯಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡೋಮ್ ನಿರ್ಮಿಸಲು ಯೋಜಿಸಲಾಗಿದೆ.

ಕ್ರೀಡಾ ಮೂಲಸೌಕರ್ಯವನ್ನು ಗ್ರಾಮೀಣ ಭಾಗಕ್ಕೂ ವಿಸ್ತರಿಸಲು ಬಂಗಾರಪೇಟೆ, ಮುದ್ದೇಬಿಹಾಳ, ಗುಳೇದಗುಡ್ಡ ಕನಕಪುರ, ಕುಕನೂರು ಮತ್ತು ಮಸ್ಕಿ ತಾಲೂಕುಗಳಲ್ಲಿ ತಲಾ ₹2 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸಲಾಗುತ್ತದೆ.

Related Articles

Back to top button