Kannada NewsKarnataka NewsLatest

*ಸಾಹಿತಿಗಳಿಗೆ ಜೀವ ಬೆದರಿಕೆ ಪ್ರಕರಣ; ಆರೋಪಿ ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, 10 ದಿನಗಳ ಕಾಲ ಸಿದ್ಸಿಬಿ ಕಸ್ಟಡಿಗೆ ವಹಿಸಲಾಗಿದೆ.

ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿವಾಜಿ ರಾವ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಆರೋಪಿ ಶಿವಾಜಿ ರಾವ್ ನನ್ನು ಪೊಲೀಸರು 10 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

Home add -Advt

ಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಿ.ಟಿ.ಲಲಿತಾನಾಯಕ್, ಬಂಜಗೆರೆ ಜಯಪ್ರಕಾಶ್ ಸೇರಿದಂತೆ ಹಲವರಿಗೆ ಆರೋಪಿ ಜೀವ ಬೆದರಿಕೆ ಹಾಕಿ ಪತ್ರ ಬರೆದಿದ್ದ. ಈ ಬಗ್ಗೆ ಸಾಹಿತಿಗಳು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು ಸಾಹಿತಿಗಳಿಗೆ ಬೆದರಿಕೆ ಹಾಕಲು ಕಾರಣವೇನು ಎಂಬ ಬಗ್ಗೆ ವಿಚಾರಣೆ ನಡೆಸಿದ್ದಾರೆ.


Related Articles

Back to top button