Latest

*ಆ ರೀತಿ ನಾನು ಹೇಳಿಯೇ ಇಲ್ಲ, ನನ್ನ ಹೇಳಿಕೆ ತಿರುಚಲಾಗಿದೆ ಎಂದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ. ರಾಜಕೀಯ ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ತಮ್ಮ ಹೇಳಿಕೆಯನ್ನು ತಿರುಚಿ, ರಾಜಕೀಯ ಲಾಭ ಪಡೆಯಲು ಹೊರಟಿರುವ ಬಿಜೆಪಿಯ ಷಡ್ಯಂತ್ರದ ಬಗ್ಗೆ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದೆ, ನಾನು ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತವಾಗಿ ಭ್ರಷ್ಟ ಎಂದು ಹೇಳಿದ್ದೆ, ಲಿಂಗಾಯತರು ಭ್ರಷ್ಟರು ಎಂದು ಎಲ್ಲಿಯೂ ಹೇಳಿಲ್ಲ. ಇದನ್ನು ವರದಿ ಮಾಡಿರುವುದು ಸರಿಯಾಗಿಲ್ಲ ಎಂದು ಹೇಳಿದರು.

ಲಿಂಗಾಯತರಲ್ಲಿ ಬಹಳಷ್ಟು ಮಂದಿ ಮುಖ್ಯಮಂತ್ರಿಗಳು ಅತ್ಯಂತ ಪ್ರಾಮಾಣಿಕರಿದ್ದರು. ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲರು ಇವರೆಲ್ಲ ಪ್ರಾಮಾಣಿಕರಾಗಿದ್ದರು ಆದರೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟರಿದ್ದಾರೆ ಎಂದು ಹೇಳಿದ್ದೆ.

Home add -Advt

ಬಿಜೆಪಿಯವರು ನನ್ನ ಹೇಳಿಕೆಯನ್ನು ಕಟ್ ಮಾಡಿ ಸೇರಿಸಿ, ತಮಗೆ ಬೇಕಾದಂತೆ ತಿರುಚಿ ಚುನಾವಣೆ ಸಂದರ್ಭವಿರುವುದರಿಂದ ಅದರ ಲಾಭ ಪಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ನನಗೆ ಲಿಂಗಾಯತ ಸಮುದಾಯದ ಬಗ್ಗೆ ಅಪಾರವಾದ ಗೌರವವಿದೆ. ಹಿಂದೆ ಬಹಳ ಜನ ಲಿಂಗಾಯತರು ಪ್ರಾಮಾಣಿಕ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದರು ಆದರೆ ಬೊಮ್ಮಾಯಿ ಮಾತ್ರ ಭ್ರಷ್ಟರಾಗಿದ್ದಾರೆ ಎಂದರು.

ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೇಟನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದೆವು, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 – 53 ಅಭ್ಯರ್ಥಿಗಳಿಗೆ ಟಿಕೇಟ್ ನೀಡಿದ್ದೇವೆ. ನಮ್ಮಲ್ಲಿ ಜಾತಿ ಮೇಲೆ ಮುಖ್ಯಮಂತ್ರಿಯ ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ನಾವೇನು ಮಾಡೋಕಾಗಲ್ಲ ಎಂದು ತಿಳಿಸಿದರು.

https://pragati.taskdun.com/murugesh-niranibilagielection-campaign/

Related Articles

Back to top button