*ಖ್ಯಾತ ಸಾಹಿತಿ, ಡಾ.ನಾಡೋಜ ಕಮಲಾ ಹಂಪನಾ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಹಿರಿಯ ಸಾಹಿತಿ, ನಾಡೋಜ ಡಾ.ಕಮಲಾ ಹಂಪನಾ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.Home add -Advt ಕಮಲಾ ಹಂಪನಾ ಅವರು ಬೆಂಗಳೂರಿನ ರಾಜಾಜಿನಗರದ ಮಗಳ ಮನೆಯಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಸಿ.ರಂಗಧಾಮನಾಯಕ್ ಹಾಗೂ ಲಕ್ಷಮ್ಮ ದಂಪತಿಯ ಪುತ್ರಿಯಾಗಿ ಕಮಲಾ ಹಂಪನಾ 1935ರ ಅಕ್ಟೋಬರ್ 28ರಂದು ಜನಿಸಿದ್ದರು. ಚಳ್ಳಕೆರೆಯಲ್ಲಿ ಪ್ರಾರಂಭವಾದ ಪ್ರಾಥಮಿಕ ವಿದ್ಯಾಭ್ಯಾಸ ಬೇರೆ ಬೇರೆ ಊರುಗಳಲ್ಲಿ ಮುಂದುವರಿಯಿತು. ತುಮಕೂರಿನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸವಾಗಿ, ೧೯೫೩ರಲ್ಲಿ ಎಸ್.ಎಸ್.ಎಲ್.ಸಿ ಮುಗಿಸಿದರು. … Continue reading *ಖ್ಯಾತ ಸಾಹಿತಿ, ಡಾ.ನಾಡೋಜ ಕಮಲಾ ಹಂಪನಾ ಇನ್ನಿಲ್ಲ*