Latest

ಎಕ್ಸ್ ಇ ಹೊಸ ರೂಪಾಂತರಿ ವೈರಸ್ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವರು

ಪ್ರಗತಿವಾಹಿನಿ ಸುದ್ದಿ; ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಎಕ್ಸ್ ಇ ಎಂಬ ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದೆ ಎಂಬ ಸುದ್ದಿ ವರದಿಯಾಗಿತ್ತು. ಆದರೆ ಅಂತಹ ಯಾವುದೇ ತಳಿ ಪತ್ತೆಯಾಗಿಲ್ಲ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಹೊಸ ತಳಿ ಪತ್ತೆಯಾಗಿರುವ ಬಗ್ಗೆ ಯಾವುದೇ ದೃಢೀಕರಣವನ್ನು ಸ್ವೀಕರಿಸಿಲ್ಲ. ಹೀಗಾಗಿ ಎಕ್ಸ್ ಇ ಹೊಸತಳಿ ಪತ್ತೆಯಾಗಿರುವುದು ಕಂಡುಬಂದಿಲ್ಲ ಎಂದು ಸಚಿವ ರಾಜೇಶ್ ಸ್ಪಷ್ಟಪಡಿಸಿದ್ದಾರೆ.

ಎಕ್ಸ್ ಇ ಹೊಸ ವೈರಸ್ ಒಮಿಕ್ರಾನ್ ಗಿಂತ 10 ಪಟ್ಟು ವೇಗವಾಗಿ ಹರಡುತ್ತದೆ. ಹೀಗಾಗಿ ಈ ಬಗ್ಗೆ ಎನ್ ಐಬಿ ವರದಿ ಬಂದ ಬಳಿಕ ಹೆಚ್ಚಿನ ವಿವರಣೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ಮುಂಬೈನಲ್ಲಿ ಎಕ್ಸ್ ಇ ಎಂಬ ಕೊರೊನಾ ಹೊಸ ವೈರಸ್ ಪತ್ತೆಯಾಗಿರುವ ಬಗ್ಗೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದಿದ್ದಾರೆ.
ಸಂಪುಟ ವಿಸ್ತರಣೆ: ಸ್ಪಷ್ಟ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ

Home add -Advt

Related Articles

Back to top button