
ಅವರಿಗೆ ನನ್ನದೊಂದು ಸಲಾಂ ಎಂದ ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಯಾರಿಂದಲೂ ಒಂದು ರೂಪಾಯಿಯನ್ನೂ ತೆಗೆದುಕೊಳ್ಳದೆ ದಿನದ 24 ಗಂಟೆಯೂ ಜನರಿಗೆ ಸೇವೆ ಸಲ್ಲಿಸುತ್ತಿರುವ ಅಪರೂಪದ ವೈದ್ಯರೊಬ್ಬರನ್ನು ಶನಿವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪರವಾಗಿ ಪುತ್ರ ಮೃಣಾಲ ಹೆಬ್ಬಾಳಕರ್ ಸನ್ಮಾನಿಸಿದರು.

ಅವರ ಸಾಮಾಜಿಕ ಹಾಗೂ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ, ಪುತ್ರ ಮೃಣಾಲ ಹೆಬ್ಬಾಳಕರ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಅವರ ಕಾರ್ಯಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸಿ ಸನ್ಮಾನಿಸಿದರು.
” ವೈದ್ಯೋ ನಾರಾಯಣೋ ಹರಿಃ” ಎನ್ನುವ ಮಾತಿನಂತೆ ಈ ವೈದ್ಯರು ಕಾರ್ಯನಿರತರಾಗಿದ್ದು, ಯಾರಿಂದಲೂ ಒಂದು ರೂಪಾಯಿಯನ್ನೂ ತೆಗೆದುಕೊಳ್ಳದೇ ಇರುವುದು ಅವರ ವ್ಯಕ್ತಿತ್ವದ ಹಿರಿಮೆ ಹಾಗೂ ಹೃದಯ ಶ್ರೀಮಂತಿಕೆಯನ್ನು ತೋರಿಸುತ್ತದೆ. ಅವರಿಗೆ ನನ್ನದೊಂದು ಸಲಾಂ ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.