ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಕಲಿ ನೋಟುಗಳನ್ನು ಝೆರಾಕ್ಸ್ ಮಾಡಿ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರಿನ ಗೋವಿಂದಪುರ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುರೇಶ್ ಕುಮಾರ್, ರಾಮಕೃಷ್ಣ, ಮಂಜುನಾಥ್ ಹಾಗೂ ಇನ್ನಿಬ್ಬರು ಬಂಧಿತರು . ನಿಷೇಧಿತ ಹಳೆಯ ಒಂದು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಜೆರಾಕ್ಸ್ ಮಾಡಿ ಹಳೆಯ ನೋಟಿಗೆ ಬದಲಾಗಿ ಹೊಸ ನೋಟು ಕೊಡುವುದಾಗಿ ಹೇಳಿ ವಂಚಿಸುತ್ತಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಾಳಿ ವೇಳೆ 1 ಸಾವಿರ ರೂಪಾಯಿ ಹಾಗೂ 500 ರೂಪಾಯಿ ಮುಖಬೆಲೆಯ 70 ಲಕ್ಷ ನಿಷೇಧಿತ ಅಸಲಿ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ವೇಳೆ ಆರೋಪಿಗಳು ಕಾಸರಗೋಡಿನಲ್ಲಿ ಬಾಕಿ ಹಣವನ್ನು ಬಚ್ಚಿಟ್ಟಿದ್ದಾಗಿ ಬಾಯ್ಬಿಟ್ಟಿದ್ದಾರೆ.
ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಕಾಸರಗೋಡಿನಲ್ಲಿಯೂ ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 6 ಕೋಟಿ ಝೆರಾಕ್ಸ್ ನೋಟುಗಳನ್ನು ಹಾಗೂ 16 ಮೂಟೆ ಝೆರಾಕ್ಸ್ ಗೆ ಬಳಸುತ್ತಿದ್ದ ಪೇಪರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಮಿಕ ಇಲಾಖೆ ಉಪ ಆಯುಕ್ತರ ಮನೆ ಮೇಲೆ ಎಸಿಬಿ ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ