Belagavi NewsBelgaum NewsKarnataka NewsLatest

*ವೈ.ಮಂಜುನಾಥ್ ಅವರ ಆಪ್ತರ ಮನೆ ಮೇಲೂ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ: ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೇ ಮಂಜುನಾಥ್​​ಗೆ ಆಪ್ತರಾಗಿರುವ ಅಧಿಕಾರಿಗಳಿಗೂ ಇಡಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

ಚಿಕ್ಕೋಡಿ ಅಬಕಾರಿ ಡಿವೈಎಸ್ಪಿ ಮತ್ತು ತುಮಕೂರು ಅಬಕಾರಿ ಎಸ್ಪಿ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ​​ ನಡೆಸಿ, ಶೋಧ ಆರಂಭಿಸಿದ್ದಾರೆ.
​​
ತುಮಕೂರು ಅಬಕಾರಿ ಎಸ್ಪಿ ಸತೀಶ ಕಾಗಲಿ ಅವರ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿರುವ ಮನೆ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು, ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯ ಶ್ರೀನಗರದಲ್ಲಿರುವ ನಿವಾಸದ ಮೇಲೂ ರೇಡ್​​ ನಡೆಸಿ ಪರಿಶೀಲಿಸಿದ್ದಾರೆ.

ಮಂಜುನಾಥ್ ಅವರ ಮತ್ತೋರ್ವ ಆಪ್ತ ಚಿಕ್ಕೋಡಿ ಅಬಕಾರಿ ಡಿವೈಎಸ್ಪಿ ವಿಶ್ವನಾಥ ಗಾಣಿಗೆರ ಮನೆ ಮೇಲೆಯೂ ಇಡಿ ದಾಳಿ​​ ನಡೆದಿದೆ. ಬೆಳಗಾವಿ ನಗರದ ಬಸವ ಕಾಲೋನಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತದಲ್ಲಿ ದಾಖಲಾಗಿದ್ದ ಡಿಎ ಕೇಸ್ ಸಂಬಂಧ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್​​ಗೆ ಸೇರಿ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. 2013ರಲ್ಲಿ ಮೈಸೂರು ಅಬಕಾರಿ ಡಿಸಿಯಾಗಿದ್ದ ವೇಳೆಯೂ ಮಂಜುನಾಥ್ ಮೇಲೆ ಲೋಕಾಯುಕ್ತ ರೇಡ್ ಆಗಿತ್ತು. ಲೈಸೆನ್ಸ್​​ಗಳ ರಿನೀವಲ್​​ನಲ್ಲಿ ಅಕ್ರಮ ಹಣ ಸಂಪಾದನೆ ಆರೋಪ ಹಿನ್ನೆಲೆ ದಾಳಿ ನಡೆದಿದ್ದು, ಸಾಕಷ್ಟು ಹಣ ಮತ್ತು ಆಸ್ತಿ ಪತ್ತೆಯಾಗಿತ್ತು. ಈ ಸಂಬಂಧ ಇಲಾಖಾ ತನಿಖೆ ಮಂಜುನಾಥ್ ಮೇಲೆ ನಡೆದಿತ್ತು ಎಂಬುದು ಗೊತ್ತಾಗಿದೆ.

Home add -Advt

Related Articles

Back to top button