CrimeKarnataka NewsLatest

*ಅಪ್ರಾಪ್ತ ಬಾಲಿಕಿ ಮೇಲೆ ಲೈಂಗಿಕ ದೌರ್ಜನ್ಯ: ಸ್ವಾಮಿಜಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಭಾಗ್ಯವಂತಿ ಮಠದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಣ್ಣಪ್ಪ ಸ್ವಾಮಿ ಬಂಧಿತ ಆರೋಪಿ. ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಭಾಗ್ಯವಂತಿ ದೇವರ ಹೆಸರಲ್ಲಿ ಮಠ ಮಾಡಿಕೊಂಡಿದ್ದ ಈ ಸ್ವಾಮೀಜಿ, ಕಳೆದ ಆರೇಳು ವರ್ಷಗಳಿಂದ ಮಠ ಮಾಡಿಕೊಂಡು ಸಾವಿರಾರು ಭಕ್ತರಿಗೆ ತನ್ನಲ್ಲಿ ದೈವ ಶಕ್ತಿಯಿದೆ ಅಂತ ಸೆಳೆದಿದ್ದರು.

ಇದೆ ಕಾರಣಕ್ಕೆ ಮಠಕ್ಕೆ ಮಂಗಳವಾರ ಹಾಗೂ ಶುಕ್ರವಾರ ನೂರಾರು ಜನ ಭಕ್ತರು ಬಂದು ಹೋಗುತ್ತಿದ್ದರು. ಕಳೆದ ಮೂರು ವರ್ಷಗಳಿಂದ ತಮ್ಮ ಮಠದಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರನ್ನ ಅಕ್ರಮವಾಗಿ ಸ್ವಮಿಜಿ ಇರಿಸಿಕೊಂಡಿದ್ದರು. ಇದರಲ್ಲಿ 16 ವರ್ಷದ ಅಪ್ರಾಪ್ತೆ ಮೇಲೆ‌ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಹೀಗಾಗಿ ಅಪ್ರಾಪ್ತ ಬಾಲಕಿಯ ತಾಯಿ ಮಹಿಳಾ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಮಹಿಳಾ ಅಭಿವೃದ್ಧಿ ಇಲಾಖೆ ವಲಯ ನಿರೀಕ್ಷಕಿ ನಾಗಮ್ಮ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಣ್ಣಪ್ಪ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದಾರೆ. ಪ್ರಕರಣ ಬೆನ್ನಲ್ಲೇ ಸ್ವಾಮಿಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button