*ನೀರಿನ ಸೆಳೆತಕ್ಕೆ ಸಿಲುಕಿ ಭೀಮಾನದಿಯಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು*

ಪ್ರಗತಿವಾಹಿನಿ ಸುದ್ದಿ: ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ಇಬ್ಬರು ಯುವಕರು ಭೀಮಾನದಿಯ ರಭಸಕ್ಕೆ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ವಡೆಗೇರ ತಾಲೂಕಿನ ಮಾಚನೂರ್ ಬಳಿ ಈ ಘಟನೆ ನಡೆದಿದೆ. ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಭೀಮಾನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ, ಇದರಿಂದಾಗಿ ಯಾದಗಿರಿ ಜಿಲ್ಲೆಯಲ್ಲಿ ಭೀಮಾನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಮಳೆಯ ನಡುವೆಯೂ ಯುವಕರಿಬ್ಬರು ಜಾನುವಾರು ಮೇಯಿಸಲು ಹೋದವರು, ಜಾನುವಾರುಗಳಿಗೆ ನೀರು ಕುಡಿಸಲು ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ … Continue reading *ನೀರಿನ ಸೆಳೆತಕ್ಕೆ ಸಿಲುಕಿ ಭೀಮಾನದಿಯಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು*