Kannada NewsKarnataka NewsLatest

*ಬಸ್-ಕಾರು ಅಪಘಾತ ಪ್ರಕರಣ: ಮೃತರ ಸಂಖ್ಯೆ 9ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಸುರಪುರ ಬಳಿ ಬಸ್-ಕಾರು ಅಪಘಾತದಲ್ಲಿ ಹೊತ್ತಿಕೊಂಡ ಬೆಂಕಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಕಾರು ಹಾಗೂ ಖಾಸಗಿ ಬಸ್‌‍ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ.

Home add -Advt

ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 6 ಜನರು ಸಜೀವದಹನವಾಗಿದ್ದರು, ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಗಾಯಾಳುಗಳಲ್ಲಿ ಮೂವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಮೃತರನ್ನು ಪಟ್ಟಣ ಪಂಚಾಯತ್ ಸದಸ್ಯ ಕೃಷ್ಣ ನಾಯಕ್(52), ಅನಂತ ಕಲಾ ನಾಯಕ್ (45), ಶರಣಪ್ಪ (36), ನಿಸರ್ಗ ಶರಣಪ್ಪ (30) ಇವರ ಪುತ್ರ ಸಿದ್ಧಾರ್ಥ ಶರಣಪ್ಪ (3) ಮತ್ತು ಶಶಿಕಲಾ (30) ಶಶಿಕಲಾ ಪುತ ಚಂದನ್ (3), ಶರಣಪ್ಪ ದಂಪತಿಯ ಪುತ್ರಿ ಒಂದೂವರೆ ವರ್ಷದ ಮಗಳು ಶ್ರೀನಿಧಿ ಸೇರಿ 9 ಜನರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ರಾಯಚೂರು ಮೂಲದವರು.

ಬಸ್ಸಿನಲ್ಲಿದ್ದ 20 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.


Related Articles

Back to top button