Latest

*ಕಲುಷಿತ ನೀರು ದುರಂತ; ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು ತನಿಖೆಗೆ ಆದೇಶಿಸಿದ ಲೋಕಾಯುಕ್ತ*

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತ ನ್ಯಾಯಮೂರ್ತಿಗಳು ತನಿಖೆಗೆ ಆದೇಶಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಿಟಕಲ್ ತಾಲೂಕಿನ ಅನಾಪುರದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮಹಿಳೆಯರು ಸಾವನ್ನಪ್ಪಿದ್ದರು. 80ಕ್ಕೂ ಹೆಚ್ಚು ಜಾರು ಅಸ್ವಸ್ಥರಾಗಿದ್ದು, ವಾಂತಿಭೇದಿಯಿಂದ ಬಳಲುತ್ತಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಸ್ವಯಂ ಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು ತನಿಖೆಗೆ ಆದೇಶಿಸಿದ್ದಾರೆ.

ಶುದ್ಧ ನೀರು ಸರಬರಾಜು ಮಾಡುವುದು ಗ್ರಾಮ ಪಂಚಾಯಿತಿಗಳ ಮೂಲಭೂತ ಕರ್ತವ್ಯ. ವಿಫಲರಾದರೆ ಅದು ಮೂಲಭೂತ ಹಕ್ಕುಗಳ ಉಲ್ಲಂಘನೆ. ಅಲ್ಲದೇ ಕರ್ನಾಟಕ ಲೋಕಾಯುಕ್ತ ಕಾಯ್ದೆ ಸೆಕ್ಷನ್ 2(1) ರ ಪ್ರಕಾರ ದುರಾಡಳಿತಕ್ಕೆ ಸಮನಾಗಿರುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

*ಕಾಡ್ಗಿಚ್ಚು ನಂದಿಸಲು ಹೋಗಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸಾವು*

Home add -Advt

https://pragati.taskdun.com/hasanasakaleshapurawildfireforest-guard-death/

Related Articles

Back to top button