ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ಕೊರೊನಾ ವಾರಿಯರ್ ಆಗಿದ್ದ ಸ್ಟಾಪ್ ನರ್ಸ್ ಒಬ್ಬರು ಮಹಾಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
ಯಾದಗಿರಿ ತಾಲೂಕಿನ ಕೌಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 12 ವರ್ಷದಿಂದ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ 34 ವರ್ಷದ ಗೀತಾ ಎಂಬುವವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸೆ.19 ರಂದು ಮೊದಲ ಬಾರಿ ಗೀತಾ ಅವರಿಗೆ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಆದರೆ ಸೆ.29ರಂದು ಕೋವಿಡ್ ಟೆಸ್ಟ್ ಮಾಡಿಸಿದಾಗ ಎರಡನೇ ಬಾರಿ ಕೊರೋನಾ ದೃಢ ಪಟ್ಟಿತ್ತು. ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗೀತಾ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಯಾದಗಿರಿ ಜಿಲ್ಲೆಯ ಕೌಳೂರಿನಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೀತಾ ಸಾವಿಗೆ ಆರೋಗ್ಯ ಸಚಿವ ಶ್ರೀರಾಮುಲು ಸಂತಾಪ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ