*ಈಜಲು ಹೋಗಿದ್ದ ನಾಲ್ಕು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವು*
ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕೃಷಿ ಹೊಂಡದ ನೀರಲ್ಲಿ ಮುಳುಗಿ ಕಿರಣ್(6), ಬಸಮ್ಮ(11), ಶರತ್(6), ಹನುಮೇಶ್(7) ಮೃತಪಟ್ಟಿದ್ದಾರೆ. ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಮಕ್ಕಳು ಈಜಲು ಹೋಗಿದ್ದರು. ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ಜಲಸಮಾಧಿಯಾಗಿದ್ದಾರೆ. ಮಕ್ಕಳನ್ನು ಕಳೆದುಕೊಂಡು ಇಡೀ ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ … Continue reading *ಈಜಲು ಹೋಗಿದ್ದ ನಾಲ್ಕು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವು*
Copy and paste this URL into your WordPress site to embed
Copy and paste this code into your site to embed