Kannada NewsKarnataka NewsLatest
*ಸರ್ಕಾರಿ ಶಾಲೆಯಲ್ಲಿ ವಾಮಾಚಾರ; ವಿದ್ಯಾರ್ಥಿಗಳು ಕಂಗಾಲು*

ಕಿಡಿಗೇಡಿಗಳ ಕೃತ್ಯ ಶಂಕೆ
ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಸರ್ಕಾರಿ ಪ್ರೌಢಶಾಲೆಯಲ್ಲಿಯೇ ಕಿಡಿಗೇಡಿಗಳು ವಾಮಾಚಾರ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಯಾದಗಿರಿ ತಾಲೂಕಿನ ಬಸವಂತಪುರ ಸರ್ಕಾರಿ ಪ್ರೌಢಶಾಲೆ ಮುಂದೆ ಹಾಗೂ ಶಾಲೆಯ ಕೊಠಡಿ ಒಳಗೆ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ. ನಿಂಬೆಹಣ್ಣು, ತೆಂಗಿನಕಾಯಿ, ಕುಂಕುಮ ಇಟ್ಟು ಮಾಟಮಂತ್ರ ಮಾಡಿದ್ದಾರೆ.
ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಶಾಲೆ ಬಳಿ ಬಂದಾಗ ಈ ವಿಚಾರ ಬೆಳಕಿಗೆ ಬಂದಿದೆ. ಅಲ್ಲದೇ ಶಾಲೆಯ ಕೊಠಡಿ ಒಲಗೂ ವಾಮಾಚಾರ ನಡೆಸಿರುವುದು ತಿಳಿದುಬಂದಿದೆ. ಇದರಿಂದ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಕೆಲ ಕಾಲ ಆತಂಕಗೊಂಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ಥಳದಲ್ಲಿದ್ದ ವಸ್ತುಗಳನ್ನು ತೆರವುಗೊಳಿಸಿ ಶುಚಿಗೊಳಿಸಿದ್ದಾರೆ.




