Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತಗಳು ನಡೆದಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಶಿವಮೊಗ್ಗದ ಭದ್ರಾವತಿಯಲ್ಲಿ ಲಾರಿ ಹರಿದು ಮೂವರು ಯುವಕರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಯಾದಗಿರಿಯಲ್ಲಿಯೂ ಭೀಕರ ಅಪಘಾತಕ್ಕೆ ಇಬ್ಬರು ಯುವಕರು ಬಲಿಯಾಗಿದ್ದಾರೆ.

ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃಷ್ಣ (21) ಹಾಗೂ ಆಕಾಶ್ (19) ಮೃತರು. ಯಾದಗಿರಿಯ ಹೊಸಹಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.

Home add -Advt

ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button