
ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಪ್ರೀತಿಸಿ ಮದುವೆಯಾದ ಜೋಡಿಯೊಂದು ಇದೀಗ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ ಲೋಡ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಯುವತಿ ಪೋಷಕರು ಹಾಗೂ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಯಾದಗಿರಿ ಜಿಲ್ಲೆಯ ಭೀಮರಾಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಚಂದ್ರಕಲಾ ಬೆಂಗಳೂರಿನಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಜನವರಿಯಲ್ಲಿ ನೋಂದಿಣಿ ಕಚೇರಿಯಲ್ಲಿ ಮದುವೆಯಾಗಿದ್ದರು.
ಆದರೆ ಯುವತಿ ಪೋಷಕರು ಬೆಂಗಳೂರಿನಲ್ಲಿ ಯುವತಿ ನಾಪತ್ತೆ ಕೇಸ್ ದಾಖಲಿಸಿದ್ದರು. ಇದೀಗ ನವ ಜೋಡಿ ಅಜ್ಞಾತ ಸ್ಥಳದಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಶೇರ್ ಮಾಡಿದ್ದು, ತಮಗೆ ಪೋಷಕರು ಹಾಗೂ ಪೊಲೀಸರು ಕಿರುಕುಳ ನೀಡುತ್ತಿದ್ದರೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ಚಾಮರಾಜಪೇಟೆಯಿಂದ ಸ್ಪರ್ಧೆಗಾಗಿ ಹೆಸರು ಬದಲಿಸಿಕೊಳ್ಳಲಿರುವ ಸಿದ್ದರಾಮಯ್ಯ; ಪ್ರತಾಪ್ ಸಿಂಹ ವ್ಯಂಗ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ