ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಮಹಿಳೆಯನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ನಡೆಸಿದ್ದ ಘಟನೆ ಬೆಳಕಿಗೆ ಬಂದಿದ್ದ ಬೆನ್ನಲ್ಲೇ ಯಾದಗಿರಿ ಜಿಲ್ಲೆಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಸೋದರ ಮಾವನೇ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ವಡಗೇರಾ ತಾಲೂಕಿನ ಗುರುಸಣಗಿಯಲ್ಲಿ ನಡೆದಿದೆ.
8 ತಿಂಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಸೋದರ ಮಾವ ಹಣಮಂತ ಯುವತಿಯ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿ, ಮೋಸಮಾಡಿದ್ದಾನೆ. ಈ ಕುರಿತು ಸಂತ್ರಸ್ತ ಯುವತಿ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಆರೋಪಿ ಹಣಮಂತನನ್ನು ಬಂಧಿಸಿದ್ದಾರೆ.
ಹಾಡಹಗಲೇ ನಡುರಸ್ತೆಯಲ್ಲಿ ಯುವತಿಗೆ ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ