Kannada NewsKarnataka NewsLatest

*ಶಾಲೆಯ ಆವರಣದಲ್ಲೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಯೊಬ್ಬ ಶಾಲೆಯ ಆವರಣದಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ವಡಗೇರಾ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ. 15 ವರ್ಷದ ಪವನ್ ಮಲ್ಲಪ್ಪ ಪೂಜಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. 9 ನೇತರಗತಿ ಓದುತ್ತಿದ್ದ ಬಾಲಕ ಇದ್ದಕ್ಕಿದ್ದಂತೆ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನ ಅಸ್ಥಳಕ್ಕೆ ಶಾಸಕ ಚನ್ನಾರೆಡ್ಡಿ ಪಾಟೀಲ್, ಜಿಲ್ಲಾಧಿಕಾರಿ ಹರ್ಷ ಬೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button