Latest

ಯುಎಇ ಕನ್ನಡ ರತ್ನ ಪ್ರಶಸ್ತಿ ನಿರಾಕರಿಸಿದ ಯದುವೀರ್‌

ಪ್ರಗತಿವಾಹಿನಿ ಸುದ್ದಿ; ಮೈಸೂರು : ಯುಎಇ ಕನ್ನಡ ರತ್ನ ಪ್ರಶಸ್ತಿಯನ್ನು ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ನಿರಾಕರಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನನಗೆ ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂಬ ಸುದ್ದಿ ಮುದ್ರಣ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ.ಈ ಪ್ರಶಸ್ತಿಯನ್ನು ತಾನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.

ಪ್ರಶಸ್ತಿಗೆ ತನ್ನನ್ನು ಪರಿಗಣಿಸಿದ್ದಕ್ಕಾಗಿ ಸಂಘಟಕರಿಗೆ ಧನ್ಯವಾದ ತಿಳಿಸುತ್ತೇನೆ. ಆದರೆ ಈ ಪ್ರಶಸ್ತಿಯನ್ನು ಸ್ವೀಕರಿಸುವುದು ಸೂಕ್ತವೆಂದು ತಾನು ಭಾವಿಸುವುದಿಲ್ಲ ಎಂದಿದ್ದಾರೆ. ನಮ್ಮ ರಾಜ್ಯ ಮತ್ತು ನಮ್ಮ ಕನ್ನಡ ಸಮುದಾಯದ ಕಲ್ಯಾಣಕ್ಕಾಗಿ ಯಾವಾಗಲೂ ಶ್ರಮಿಸುತ್ತೇನೆ. ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದೇನೆ. ಯುಎಇಯಲ್ಲಿರುವ ನಮ್ಮ ಕನ್ನಡ ಸಮುದಾಯವನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆಂದು ತಿಳಿಸಿದ್ದಾರೆ.

ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ; 18ಜನರ ವಿರುದ್ಧ FIR ದಾಖಲು

Home add -Advt

https://pragati.taskdun.com/politics/eranna-kadadi-car-attack-case18-peoplefir-file/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button