Kannada NewsKarnataka NewsLatest

*ಯಕ್ಷಲೋಕದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೆಶ್ವರ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಯಕ್ಷಗಾನ ಲೋಕದ ಗಾನ ಕೋಗಿಲೆ, ಭಾಗವತ ಶ್ರೇಷ್ಠ ಎಂದೇ ಪ್ರಸಿದ್ಧರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.

ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತರು, ಯಕ್ಷ ಲೋಕದ ಗಾನ ಕೋಗಿಲೆ ಎಂದೇ ಖ್ಯಾತಿ ಪಡೆದಿದ್ದ ಸುಬ್ರಹ್ಮಣ್ಯ ಧಾರೇಶ್ವರ ಇಂದು ಬೆಳಗಿನ ಜಾವ ಬೆಂಗಳೂರಿನ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಧಾರೇಶ್ವರ ಪತ್ನಿ, ಪುತ್ರ ಹಾಗೂ ಮಗಳನ್ನು ಅಗಲಿದ್ದಾರೆ.

ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಿರಿಮಂಜೇಶ್ವರದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಸುಬ್ರಹ್ಮಣ್ಯ ಧಾರೇಶ್ವರ ಅವರು ಪೆರ್ಡೂರು ಮೇಳದಲ್ಲಿ ಸುದೀರ್ಘ 28 ವರ್ಷಗಳ ಕಾಲ ಭಾಗವತರಾಗಿದ್ದರು. ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ ಶಿರಸಿ ಮೇಳದಲ್ಲಿಯೂ ಭಾಗವತರಾಗಿದ್ದರು.

400ಕ್ಕೂ ಹೆಚ್ಚು ಯಕ್ಷಗಾನ ಪದ್ಯಗಳ ಕ್ಯಾಸೆಟ್ ಗಳಿಗೆ ಧ್ವನಿಯಾಗಿದ್ದರು. 300ಕ್ಕೂ ಅಧಿಕ ಪೌರಾಣಿಕ, ಸಾಮಾಜಿಕ, ಐತಿಹಾಸಿಕ ಪ್ರಸಂಗಗಳನ್ನು ನಿರ್ದೇಶನ ಮಾಡಿದ್ದರು. ಸಾಂಪ್ರದಾಯಿಕ ರಾಗಗಳ ಜೊತೆ ಹೊಸ ರಾಗಗಳ ಪ್ರಯೋಗವನ್ನು ಮಾಡಿ ಅಶಸ್ವಿಯಾಗಿದ್ದರು. ಸುಬ್ರಹ್ಮಣ್ಯ ಧಾರೇಶ್ವರ ಅವರ ನಿಧನ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಟ. ಅವರ ಅಪಾರ ಅಭಿಮನಿಗಳು, ಯಕ್ಷಗಾನ ಕಲಾವಿದರು ಧ್ವಾರೇಶ್ವರ ಅವರ ಅಗಲಿಕೆಗೆ ಕಂಬನಿ ಮಿಡಿದಿದೆ.

Related Articles

Back to top button