Latest

*ರಂಗಸ್ಥಳದಲ್ಲೇ ಹೃದಯಾಘಾತ; ಯಕ್ಷಗಾನ ಮಾಡುತ್ತಲೇ ಕೊನೆಯುಸಿರೆಳೆದ ಹಿರಿಯ ಕಲಾವಿದ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕಟಿಲು ಮೇಳದ ಯಕ್ಷಗಾನ ಕಲಾವಿದರೊಬ್ಬರು ರಂಗಸ್ಥಳದಲ್ಲಿಯೇ ಹೃದಯಾಘಾತದಿಂದ ವಿಧಿವಶರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಕಟೀಲು ಬಳಿ ನಡೆದಿದೆ.

ಇಲ್ಲಿನ ಸರಸ್ವತಿ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ಕಾರ್ಯಕರಮದಲ್ಲಿ ಭಾಗವಹಿಸಿದ್ದ ಕಲಾವಿದ ಗುರುವಪ್ಪ ಬಾಯಾರು (58) ಯಕ್ಷಗಾನ ಮಾಡುವಾಗಲೇ ರಂಗಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ. ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Home add -Advt

ತ್ರಿಜನ್ಮ ಮೋಕ್ಷ ಪ್ರಸಂಗದ ಕೊನೆಯ ಭಾಗ ಪ್ರದರ್ಶನಗೊಳ್ಳುತ್ತಿತ್ತು. ಈ ವೇಳೆಯೇ ರಂಗಸ್ಥಳದಲ್ಲಿ ಶಿಶುಪಾಲನ ಪಾತ್ರಧಾರಿಯಾಗಿ ನಿಂತಿದ್ದ ಗುರವಪ್ಪ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.  ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಕೊನೆಯುಸಿರೆಳೆದಿದ್ದರು.

*ಗೋವಾ ಹಾಗೂ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ ಗೋಗಟೆ ಶಿಕ್ಷಣ ಸಂಸ್ಥೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌*

 

https://pragati.taskdun.com/gogate-education-institute-is-educating-students-from-goa-and-north-karnataka-chief-minister-basavaraja-bommai/

Related Articles

Back to top button