ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕೆ ದರ್ಶನವನ್ನು ನಿಷೇಧಿಸಲಾಗಿದೆ.
10 ತಿಂಗಳ ನಂತರ ಕಳೆದ ಫೆ.1ರಿಂದ ಈ ದೇವಸ್ಥಾನಗಳಿಗೆ ಭಕ್ತರ ಪ್ರವೇಶ ಆರಂಭವಾಗಿತ್ತು. ಆದರೆ ಇದೀಗ ಪುನಃ ದೇವರ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೂ ಈ ನಿರ್ಬಂಧ ಮುಂದುವರಿಯಲಿದೆ.
ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕ ದರ್ಶನಕ್ಕೆ ಮಹಾರಾಷ್ಟ್ರದಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಆರಂಭವಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಆದೇಶದ ಪೂರ್ಣ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – prohibition of darshan to temple
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ