ಪ್ರಗತಿವಾಹಿನಿ ಸುದ್ದಿ, ಯಮಕನಮರಡಿ: ಯಮಕನಮರಡಿ ಕ್ಷೇತ್ರದ ಶಾಸಕರು ಅಭಿವೃದ್ಧಿಗಿಂತ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಭಯದ ವಾತಾವರಣ ನಿರ್ಮಿಸಿ ಮತ ಪಡೆದ ಅವರು, ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಬಸಾಪೂರ ಗ್ರಾಮದಲ್ಲಿ ಭಾನುವಾರ ನಡೆದ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಇಡೀ ರಾಜ್ಯದಲ್ಲೇ ಬದಲಾವಣೆ ಗಾಳಿ ಬೀಸುತ್ತಿದ್ದು, ಜನರು ಬಿಜೆಪಿಯತ್ತ ಒಲವು ತೋರುತ್ತಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ ನಡೆಸುತ್ತಿದೆ. ಆದರೆ, ಬಸ್ಸಿನ ಬ್ರೇಕ್ ಫೇಲ್ ಆಗಿದೆ ಎಂದು ವ್ಯಂಗ್ಯವಾಡಿದರು.
ಹಿಂದೂ ಪದ ಅಶ್ಲೀಲ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ತಾಕತ್ತಿದ್ದರೆ ಅವರು ತಮಗೆ ಹಿಂದೂ ಮತಗಳು ಬೇಡವೆಂದು ಹೇಳಲಿ ಎಂದು ಕಟೀಲು ಸವಾಲು ಹಾಕಿದರು.
ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ ನೇರ್ಲಿ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಮಾಜಿ ಸಚಿವ ಶಶಿಕಾಂತ ನಾಯಿಕ
ಮಾತನಾಡಿದರು. ಗ್ರಾಮದಲ್ಲಿ ಮನೆ-ಮನೆಗೆ ತೆರಳಿ ಪಕ್ಷದ ಸ್ಟಿಕ್ಕರ್ ಅಂಟಿಸಿದರು. ಮತದಾರರಿಗೆ ಕರಪತ್ರ ಹಂಚಿದರು.
ಪಕ್ಷದ ಯಮಕನಮರಡಿ ಉತ್ತರ ಮಂಡಲ ಅಧ್ಯಕ್ಷ ಶ್ರೀಶೈಲ ಯಮಕನಮರಡಿ, ಉಜ್ವಲಾ ಬಡವಣಾಚೆ, ಸತೀಶ ಅಪ್ಪಾಜಿ, ಕರಕುಶಲ ಅಭಿವೃದ್ಧ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ಬಸವರಾಜ ಹುಂದ್ರಿ, ಶಿವಾನಂದ ಮಸಗುಪ್ಪಿ, ಕಲಗೌಡ ಪಾಟೀಲ, ಸಿದ್ದಲಿಂಗ ಸಿದ್ದಗೌಡರ ಇದ್ದರು.
https://pragati.taskdun.com/international-kite-festivalshashikala-jollebelagavinippani/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ