Kannada NewsLatestNational

*ಯಮುನಾ ನದಿಯಲ್ಲಿ ದೋಣಿ ದುರಂತ: 10 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಯಮುನಾನದಿಯಲ್ಲಿ ದೋಣಿ ದುರಂತ ಸಂಭವಿಸಿ 10 ಯತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದ ಶೃಂಗಾರ್ ಘಾಟ್ ಬಳಿ ಯಮುನಾ ನದಿಯಲ್ಲಿ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿ ಬಿದ್ದ ಪರಿಣಾಮ 10 ಜನರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.

Home add -Advt

ಪಂಜಾಬ್‌ನ ಲುಧಿಯಾನದ ಸುಮಾರು 25 ಭಕ್ತರು ಪ್ರಯಾಣಿಸುತ್ತಿದ್ದ ಬೋಟ್ ಮಗುಚಿ ಬಿದ್ದಿದೆ. ಬಂಕೆ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಲು ಈ ಭಕ್ತರು ಯಮುನಾನದಿಯಲ್ಲಿ ಬೂಟ್ ಮೂಲಕ ಸಾಗುತ್ತಿದ್ದರು.

ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮಥುರಾ ಜಿಲ್ಲೆಯಲ್ಲಿ ನಡೆದ ದೋಣಿ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ಅತ್ಯಂತ ದುರಂತ ಮತ್ತು ಹೃದಯ ವಿದ್ರಾವಕವಾಗಿದೆ ಎಂದು ಹೇಳಿದ್ದಾರೆ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸ್ಥಳಕ್ಕೆ ತಲುಪಲು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸಲು ಮತ್ತು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಸೂಚನೆಗಳನ್ನು ನೀಡಲಾಗಿದೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ನಾನು ಭಗವಾನ್ ಶ್ರೀ ರಾಮನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.


Related Articles

Back to top button