Film & EntertainmentKannada NewsKarnataka NewsLatest

*ಬೆಳ್ಳಂ ಬೆಳಿಗ್ಗೆ ನಟ ಯಶ್ ಗೆ ಬಿಗ್ ಶಾಕ್: ಅಕ್ರಮವಾಗಿ ನಿರ್ಮಿಸಿದ್ದ ಕಾಂಪೌಂಡ್ ಧ್ವಂಸ*

ಪ್ರಗತಿವಾಹಿನಿ ಸುದ್ದಿ: ನಟ ಯಶ್ ಅವರ ತಾಯಿಗೆ ಸೇರಿದ ಮನೆಯ ಕಾಂಪೌಂಡ್ ನ್ನು ಜೆಸಿಬಿ ಮೂಲಕ ಬೆಳಂಬೆಳಿಗ್ಗೆ ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ವಿದ್ಯಾನಗರದ ಲಕ್ಷ್ಮ್ಮಮ್ಮ ಎಂಬ ಜಾಗದಲ್ಲಿರುವ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ ಮನೆಯ ಸುತ್ತಲು ಅಕ್ರಮವಗಿ ಕಾಂಪೌಂಡ್ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಸುಮಾರು 1500 ಅಡಿ ಅಕ್ರಮವಾಗಿ ಜಾಗ ಒತ್ತುವರಿ ಮಾಡಿ ಕಾಂಪೌಂಡ್ ನಿರ್ಮಿಸಲಾಗಿದೆ ಎಂದು ಜಾಗದ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು.

ಇದೀಗ ಕೋರ್ಟ್ ನಿಂದ ಅನುಮತಿ ಪಡೆದು ಅಧಿಕಾರಿಗಳ ಸಮ್ಮುಖದಲ್ಲಿ ಜೆಸಿಬಿ ಮೂಲಕ ಅಕ್ರಮನಾವಿ ನಿರ್ಮಿಸಿದ್ದ ಕಾಂಪೌಂಡ್ ತೆರವುಗೊಳಿಸಲಾಗಿದೆ. ಕಾಂಪೌಂಡ್ ತೆರವು ಮಾಡುತ್ತಿದ್ದಂತೆ ಪುಷ್ಪ ಪರ ವಕೀಲರು ಸ್ಥಳಕ್ಕೆ ಆಗಮಿಸಿದ್ದು, ಕಾಂಪೌಂಡ್ ತೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button