Latest

ಬಿಜೆಪಿಗೆ ದೊಡ್ಡ ಆಘಾತ

 

ಬಿಜೆಪಿ ತೊರೆದು ಟಿಎಂಸಿ ಸೇರ್ಪಡೆಯಾದ ಯಶ್ವಂತ್ ಸಿನ್ಹಾ

ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಈ ನಡುವೆ ಮಾಜಿ ಹಣಕಾಸು ಸಚಿವ, ಬಿಜೆಪಿ ಹಿರಿಯ ನಾಯಕ ಯಶ್ವಂತ್ ಸಿನ್ಹಾ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ವಂತ್ ಸಿನ್ಹಾ, ಬಿಜೆಪಿಯಲ್ಲಿ ಅಭಿಪ್ರಾಯಗಳನ್ನು ಹತ್ತಿಕ್ಕಲಾಗುತ್ತಿದೆ. ವಾಜಪೇಯಿ ಅವರ ಕಾಲದಲ್ಲಿ ಎಲ್ಲಾ ವಿಷಗಳಲ್ಲಿ ಸಹಮತ ಮೂಡುತ್ತಿತ್ತು ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಮೇಲೆ ದಾಳಿ ನಡೆದ ಬಳಿಕ ತೃಣಮೂಲ ಕಾಂಗ್ರೆಸ್ ಸೇರುವ ಬಗ್ಗೆ ನಿರ್ಧಾರ ತೆಗೆದುಕೊಂಡೆ ಎಂದು ಸಿನ್ಹಾ ಹೇಳಿದ್ದಾರೆ.

Home add -Advt

Related Articles

Back to top button