National

*ಮಹಾಂತ ಯತಿ ನರಸಿಂಹಾನಂದ ಸರಸ್ವತಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಹಾಂತ ಯತಿ ನರಸಿಂಹಾನಂದ ಸರಸ್ವತಿ ಅವರನ್ನು ಉತ್ತರ ಪ್ರದೇಶದ ಘಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ.

ಪ್ರವಾದಿ ಮುಹಮ್ಮದ್ ವಿರುದ್ಧ ಧರ್ಮ ನಿಂದನೆ ಹೇಳಿಕೆ ಆರೋಪದಡಿ ದಾಸ್ನಾದೇವಿ ದೇವಸ್ಥಾನದ ಮಹಾಂತ ಯತಿ ನರಸಿಂಹಾನಂದ ಸರಸ್ವತಿ ಅವರನ್ನು ಬಂಧಿಸಲಾಗಿದೆ.

ಸೆ.29ರಂದು ಲೋಹಿಯಾನಗರದ ಹಿಂದಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯತಿ ನರಸಿಂಹಾನಂದ ಸರಸ್ವತಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಪ್ರವಾದಿ ಮಹಮ್ಮದ್ ವಿರುದ್ಧ ಧರ್ಮ ನಿಂದನೆ ಹೇಳಿಕೆ ನೀಡಿದ್ದರು ಎಂಬ ಕಾರಣಕ್ಕೆ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಘಾಜಿಯಾಬಾದ್ ಸೇರಿದಂತೆ ಉತ್ತರ ಪ್ರದೇಶದ ಕೆಲವೆಡೆ ಮುಸ್ಲಿಂ ಸಮುದಾಯದವರು ಯತಿ ನರಸಿಂಹಾನಂದ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಈ ಬೆಳವಣಿಗೆ ಬೆನ್ನಲ್ಲೇ ಯತಿ ನರಸಿಂಹಾನಂದ ಸರಸ್ವತಿ ಅವರನ್ನು ಘಾಜಿಯಾಬಾದ್ ನಲ್ಲಿ ಬಂಧಿಸಲಾಗಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button