Kannada NewsKarnataka NewsNationalSportsTravel

*ಟಿ20 ಪಂದ್ಯದಲ್ಲಿ ಹೊಸ ದಾಖಲೆ ಬರೆದ ಟೀಮ್ ಇಂಡಿಯಾ*

ಪ್ರಗತಿವಾಹಿನಿ ಸುದ್ದಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಸೆಂಚುರಿಯನ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 11 ರನ್ ಗಳಿಂದ ಸೋಲಿಸುವ ಮೂಲಕ ಟಿ20 ಕ್ರಿಕೆಟ್ ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ.‌ 

ಭಾರತ ತವರಿನಿಂದ ಆಚೆ 100 ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಿನ್ನೆ ನಡೆದ ಪದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಸೂರ್ಯ ಕುಮಾರ್ ಪಡೆ ತಿಲಕ್ ವರ್ಮಾ ಶತಕದಾಸರೆಯಿಂದ ನಿಗದಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಗಳನ್ನು ದಾಖಲಿಸಿತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಹರಿಣಗಳ ಪಡೆ ನಿಗದಿತ 20 ಓವರ್ ಗೆ 7 ವಿಕೆಟ್ ನಷ್ಟಕ್ಕೆ 209 ರನ್ ಶಕ್ತವಾಯಿತು. ಈ ಮೂಲಕ ಇದೇ ಮೊದಲ ಬಾರಿಗೆ ಸೆಂಚುರಿಯನ್‌ನಲ್ಲಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಈ ಗೆಲುವಿನ ಮೂಲಕ ಭಾರತ ತಂಡವು ತವರಿನಿಂದ ಆಚೆ 100 ಟಿ20 ಪಂದ್ಯಗಳಲ್ಲಿ ಸಂಪೂರ್ಣ ಗೆಲುವು ದಾಖಲಿಸಿದ ಎರಡನೇ ತಂಡವಾಗಿ ಹೊರಹೊಮ್ಮಿದೆ. 100 ಟಿ20 ಪಂದ್ಯ ಗೆದ್ದ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ.

Home add -Advt

Related Articles

Back to top button