Kannada NewsKarnataka NewsLatestPolitics

*ಕೇಂದ್ರ ಗೃಹ ಸಚಿವರ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ; ಗೂಂಡಾ, ರೌಡಿ ಎಂದು ಟೀಕೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ.

ಚಾಮರಾಜನಗರದಲ್ಲಿ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂಥವರೇ ಸಹವರ್ತಿಗಳು ಎಂದು ಟೀಕಿಸಿದ್ದಾರೆ.

ಅಮಿತ್ ಶಾ ಗುಜರಾತ್ ನಲ್ಲಿ ಕೊಲೆ ಆರೋಪ ಎದುರಿಸುತ್ತಿದ್ದಾರೆ. ಅವರಿಗೆ ಅಪರಾಧ ಚಟುವಟಿಕೆಗಳ ಹಿನ್ನೆಲೆ ಇದೆ. ಆದರೆ ಈಗ ಅವರು ದೇಶದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ ಎಂದರು.

Home add -Advt

ನಿರುದ್ಯೋಗಿಗಳಿಗೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿತ್ತು. ಆದರೆ ಈಗ ಉದ್ಯೋಗ ಸೃಷ್ಟಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಅಲ್ಲ ಎನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


Related Articles

Back to top button