Latest

ವಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರನಿಗೂ ಕೊರೊನಾ ಪಾಸಿಟೀವ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಕುರಿತು ಸ್ವತ: ಯತೀಂದ್ರ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಯತೀಂದ್ರ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಆಗಸ್ಟ್ 4ರಂದು ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button