
ಪ್ರಗತಿವಾಹಿನಿ ಸುದ್ದಿ: ಮುಸ್ಲಿಂ ಯುವತಿ ಮದುವೆಯಾದವರುಗೆ 5 ಲಕ್ಷ ರೂಪಾಯಿ ನೀಡುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಿಸಿದ್ದಾರೆ.
ಕೊಪ್ಪಳದಲ್ಲಿ ಮುಸ್ಲಿಂ ಯುವತಿ ಪ್ರೀತಿಸಿ ಬಳಿಕ ಕೊಲೆಯಾಗಿದ್ದ ಗವಿಸಿದ್ದಪ್ಪ ನಿವಾಸಕ್ಕೆ ಶಾಸಕ ಯತ್ನಾಳ್ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಮುಸ್ಲಿಂ ಯುವತಿ ಮದುವೆಯಾದವರಿಗೆ 5 ಲಕ್ಷ ಕೊಡಲಾಗುವುದು. ಈ ರೀತಿ ಅಭಿಯಾನ ಆರಂಭಿಸುತ್ತೇವೆ ಎಂದರು.
ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಂರಿಗಿದೆ. ರೀಲ್ಸ್ ನಲ್ಲಿ ಮಚ್ಚು ತೋರಿಸಿದ್ದಾನೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಗವಿಸಿದ್ದಪ್ಪ ಪ್ರೀತಿಸಿದ್ದ ಹುಡುಗಿಯನ್ನು ಕೂದ ಬಂಧಿಸಬೇಕು. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಸದನದಲ್ಲಿ ವಿಷಯ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.