Kannada NewsKarnataka NewsNationalPolitics

*ಸುಪ್ರೀಂ ಕೋರ್ಟ್‌ನಲ್ಲಿ ಗೆದ್ದ ಯತ್ನಾಳ್‌*

ಪ್ರಗತಿವಾಹಿನಿ ಸುದ್ದಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರ ಆಯ್ಕೆಯನ್ನು ಪ್ರಶ್ನಿಸಿ, ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ನಡೆಸುತ್ತಿದ್ದ ಕಾನೂನು ಹೋರಾಟಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. 

ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್, ಮುಶ್ರೀಫ್ ಅರ್ಜಿಯನ್ನು ವಜಾಗೊಳಿಸುವ ಮೂಲಕ ಯತ್ನಾಳ್ ಅವರ ಶಾಸಕ ಸ್ಥಾನದ ಮೇಲಿದ್ದ ತೂಗುಗತ್ತಿಯನ್ನು ಸಂಪೂರ್ಣವಾಗಿ ನಿವಾರಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯತ್ನಾಳ್ ಅಕ್ರಮವೆಸಗಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ, ಅಬ್ದುಲ್ ಹಮೀದ್ ಮುಶ್ರೀಫ್  ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯು ಯತ್ನಾಳ್ ಅವರ ಶಾಸಕ ಸ್ಥಾನಕ್ಕೆ ಸವಾಲಾಗಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿದ್ದ ಕಲಬುರಗಿ ಹೈಕೋರ್ಟ್ ಪೀಠವು, ಕಳೆದ 2023ರ ಜುಲೈ 18 ರಂದು ಮುಶ್ರೀಫ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಅಷ್ಟೇ ಅಲ್ಲದೆ, ಅರ್ಜಿದಾರರಿಗೆ ದಂಡವನ್ನೂ ವಿಧಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಶ್ರೀಫ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದು, ಅದು ಸರಿಯಾಗಿದೆ ಎಂದು ತೀರ್ಪು ನೀಡಿ ಮುಶ್ರೀಫ್ ಅವರ ಅರ್ಜಿಯನ್ನು ವಜಾಗೊಳಿಸಿದೆ. ಇದರೊಂದಿಗೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎದುರಾಗಿದ್ದ ಕಾನೂನು ಸವಾಲು ಸಂಪೂರ್ಣವಾಗಿ ಕೊನೆಗೊಂಡಿದೆ.

Home add -Advt

Related Articles

Back to top button