
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅವಹೇಳನಕಾರಿ ವಿಡಿಯೋ ಅಪ್ ಲೋಡ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಹುಸೇನಿ ಬಂಧಿತ ಯುವಕ. ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸೌ ಯುವಕನನ್ನು ಬಂಧಿಸಿದ್ದಾರೆ. ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದ ಯುವಕ ಹುಸೇನಿ, ಶಾಸಕ ಯತ್ನಾಳ್ ವಿರುದ್ಧ ಅವಹೇಳನಕಾರಿ ಮಾತನಾಡಿ ವಿಡಿಯೋ ಹರಿಬಿಟ್ಟಿದ್ದ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೇ ಯತ್ನಾಳ್ ಬೆಂಬಲಿಗರು ಗ್ರಾಮಕ್ಕೆ ದೌಡಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಯುವಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಯುವಕನನ್ನು ಬಂಧಿಸಲಾಗಿದೆ.