Politics

*ಬಿಜೆಪಿ ರಾಜ್ಯಾಧ್ಯಕ್ಷರನ್ನು ಸಿಎಂ, ಡಿಸಿಎಂ ನಿರ್ಧಾರ ಮಾಡುವ ಸ್ಥಿತಿ ಬಂದಿದೆ: ಯತ್ನಾಳ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮತೆ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಿಜಯೇಂದ್ರ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ರಾಜ್ಯಾಧ್ಯಕ್ಷರು ಯಾರಾಗಬೇಕು ಎಂದು ನಿರ್ಧರಿಸುವ ಸ್ಥಿತಿ ಬಂದಿದೆ. ನಾನು ರಾಜ್ಯಾಧ್ಯಕ್ಷನಾಗುತ್ತೇನೆ ಎಂದು ವಿಜಯೇಂದ್ರ ಕೈ ಎತ್ತಿದ್ದಾರೆ. ಅದಕ್ಕೆ ಅವರು ನೀನೇ ರಾಜ್ಯಾಧ್ಯಕ್ಷನಾಗಬೇಕು ಎಂದು ಹೇಳಿದ್ದಾರೆ ಎಂದು ಕಿಡಿಕಾರಿದರು.

ವಿಜಯೇಂದ್ರ ಮನೆಯಲ್ಲಿ ಭಯದ ಸ್ಥಿತಿ ಇರಬಹುದು. ಆದರೆ ನಮಗೆ ಯಾವುದೇ ಭಯವಿಲ್ಲ. ಇವರು ಕಾಂಗ್ರೆಸ್ ಪಕ್ಷದ ಜೊತೆ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದಾರೆ. ಇದು ಬಹಳ ದಿನ ನಡೆಯಲ್ಲ. ವಿಜಯೇಂದ್ರ ಅಧ್ಯಕ್ಷ ಸ್ಥಾನದಿಂದ ಬದಲಾಗುವವರೆಗೂ ನಾವು ಹೋರಾಡುತ್ತೇವೆ. ನಮ್ಮನ್ನು ಪಕ್ಷದಿಂದ ಉಚ್ಛಾಟಿಸಬಹುದು, ಆದರೆ ಅದಕ್ಕೂ ನಾವು ರೆಡಿ ಇದ್ದೇವೆ ಎಂದು ಗುಡುಗಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button