ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಬದಲಾವಣೆ ಮಾಡಬೇಕು ಎಂದು ಯತ್ನಾಳ್ ಬಣ ಪಟ್ಟು ಹಿಡಿದಿದೆ. ಅಧ್ಯಕ್ಷರ ಚುನಾವಣೆಯಲ್ಲಿ ನಾವು ನಮ್ಮ ಬಣದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ರಾಜ್ಯಾಧ್ಯಕ್ಷರ ಬದಲವಣೆಯಾಗಲೇಬೇಕು. ವಿಜಯೇಂದ್ರರನ್ನು ಹೈಕಮಾಂಡ್ ಯಾಕೆ ಅಧ್ಯಕ್ಷರನ್ನಾಗಿ ಮಾಡಿದೆ ಗೊತ್ತಿಲ್ಲ ಎಂದು ಹೇಳಿದರು.
ಶಾಸಕ ರಮೇಶ್ ಜಾರಕಿಹೊಳಿ ಜೊತೆ ಚರ್ಚಿಸಿ ನಾವು ನಮ್ಮ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ. ಪಕ್ಷದ ಹಿತದೃಷ್ಟಿಯಿಂದ ಅಧ್ಯಕ್ಷರ ಬದಲಾವಣೆಯಾಗಲೇ ಬೇಕು ಎಂದರು.
ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಕಡತಗಳಿಗೆ ವಿಜಯೇಂದ್ರನೇ ಯಡಿಯೂರಪ್ಪನವರ ಸಹಿ ಮಾಡಿದ್ದಾರೆ. ಈ ಬಗ್ಗೆ ತನಿಖೆಯಾಗಲಿ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ