
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯಿಂದ ಉಚ್ಛಾಟನೆಗೊಂಡ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಫುಲ್ ಆಕ್ಟೀವ್ ಆಗಿದ್ದು, ಹೊಸ ಪಕ್ಷ ರಚನೆ ಮಾಡುವುದಾಗಿ ಘೋಷಿಸಿದ್ದಾರೆ.
ಯುಗಾದಿ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಸಿದ್ದೇಶ್ವರ ದೇಗುಲದಲ್ಲಿ ಪತ್ನಿ ಶೈಲಜಾ ಜೊತೆ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಹಲವಾರು ಧರಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಹೊಸ ಪಕ್ಷ ರಚನೆ ಬಗ್ಗೆ ಸುಳಿವು ನೀಡಿದರು.
ರಾಜ್ಯದಲ್ಲಿ ಹಿಂದೂ ಪಕ್ಷ ಕಟ್ಟುವ ಅನಿವಾರ್ಯತೆ ಇದೆ. ಇಂದಿನಿಂದಲೇ ನಮ್ಮ ಹೋರಾಟ ಆರಂಭವಾಗಲಿದೆ. ಕುಟುಂಬ ರಾಜಕಾರಣ, ಭ್ರಷ್ಟಾಚಾರದ ವಿರುದ್ಧ ನಾನು ಹೋರಾಟ ಮಾಡುತ್ತೇನೆ ಎಂದರು.
ತಂದೆಯ ಸಹಿಯನ್ನೇ ನಕಲು ಮಾಡಿದ ವಿಜಯೇಂದ್ರ ವಿರುದ್ಧ ನಮ್ಮ ಹೋರಾಟ ನಡೆಯಲಿದೆ. ಯಡಿಯೂರಪ್ಪ, ವಿಜಯೇಂದ್ರ ಕುಟುಂಬ ರಾಜಕಾರಣ ತಡೆಯಬೇಕಿದೆ.ವಿಜಯೇಂದ್ರರನ್ನು ಅಧ್ಯಕ್ಷರನ್ನಾಗಿ ಮುಂದುವರೆಸಿದರೆ ಅದು ಪಕ್ಷದ ಕರ್ಮ. ಮುಂದಿನ ವಿಜಯದಶಮಿಗೆ ರಾಜ್ಯದಲ್ಲಿ ಹೊಸ ಪಕ್ಷ ರಚನೆಯಾಗಲಿದೆ ಎಂದು ಹೇಳಿದರು.