


ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕುರಿತು ಬೆಳಗಾವಿ ನಗರದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ಭಾಗವಹಿಸದಂತೆ ನಿಷೇಧಿಸಲಾಗಿದೆ.
ಪಂಚಮಸಾಲಿ 2ಎ ಮೀಸಲಾತಿ ಹಾಗೂ ಲಿಂಗಾಯಿತ ಎಲ್ಲಾ ಒಳಪಂಗಡಗಳಿಗೆ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿ ನಗರದಲ್ಲಿ ನಡೆಯಲಿರುವ ಹೋರಾಟ, ಮೆರವಣಿಗೆಯಲ್ಲಿ ಯತ್ನಾಳ್ ಭಾಗವಹಿಸುವಂತಿಲ್ಲ ಎಂದು ಜಿಲ್ಲಾಡಳಿತ ನಿಷೇಧ ಹೇರಿದೆ.
ಲಿಂಗಾಯಿತ ಪಂಚಮಸಾಲಿ ಮಹಾಸಭಾ ಆಯೋಜಿಸಿರುವ ಲಿಂಗಾಯಿತ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಮೆರವಣಿಗೆ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಯತ್ನಾಳ್ ಅವರಿಗೆ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಡಿಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ