Kannada NewsLatest

*ಅಥಣಿಯಿಂದ ಯಾರಿಗೆ ಬಿಜೆಪಿ ಟಿಕೆಟ್; ಮಹೇಶ್ ಕುಮಟಳ್ಳಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರು ಭರವಸೆ ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಶಾಸಕ ಮಹೇಶ್ ಕುಮಟಳ್ಳಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವುದಾಗಿ ವರಿಷ್ಠರು ಭರವಸೆ ಕೊಟ್ಟಿದ್ದಾರೆ. ವರಿಷ್ಠರು ಭರವಸೆ ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಇನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದ ಟಿಕೆಟ್  ಗಾಗಿ ಸವದಿ ಹಾಗೂ ಕುಮಟಳ್ಳಿ ನಡುವೆ ಬಿಗ್ ಫೈಟ್ ವಿಚಾರವಾಗಿ ಮಾತನಾಡಿದ ಕುಮಟಳ್ಳಿ, ನಾನು ಸಹ ಅಥಣಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು, ಪಕ್ಷದ ಕೆಲಸಗಳನ್ನು ಮಾಡುತ್ತಿದ್ದೇನೆ. ಲಕ್ಷ್ಮಣ ಸವದಿ ಅವರೂ ಕೂಡ ಕೆಲಸ ಮಾಡಿದ್ದಾರೆ. ಟಿಕೆಟ್ ಕೊಡುವುದು ಬಿಡುವುದು ವರಿಷ್ಠರಿಗೆ ಬಿಟ್ಟದ್ದು ಎಂದರು.

ನಾವು ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಲುತ್ತೇವೆ. ನಮ್ಮಲ್ಲಿ ಯಾವುದೇ ಅಸಮಾಧಾನವೂ ಇಲ್ಲ ಎಂದು ಹೇಳಿದರು.

Home add -Advt

*ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

https://pragati.taskdun.com/karnatakarainbangaloreimd/

Related Articles

Back to top button