Politics

*ಯತ್ನಾಳ್ ಹೊಸ ಬಾಂಬ್: ರನ್ಯಾ ಜೊತೆ ಸಂಪರ್ಕ ಇರುವ ಇಬ್ಬರು ಸಚಿವರ ಹೆಸರು ನಾಳೆ ರೀವಿಲ್*

ಪ್ರಗತಿವಾಹಿನಿ ಸುದ್ದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ಜೊತೆಗೆ ಸಂಪರ್ಕದಲ್ಲಿದ್ದ ಇಬ್ಬರು ಸಚಿವರ ಹೆಸರನ್ನು ನಾಳೆ ಸದನದಲ್ಲಿ ಬಹಿರಂಗ ಪಡಿಸುತ್ತೇನೆ ಎನ್ನುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಕುರಿತು ಸದನದಲ್ಲಿ ಮಾತನಾಡುತ್ತೇನೆ. ಈ ನಟಿಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಸಚಿವರ ಹೆಸರನ್ನು ಸದನದಲ್ಲಿ ಹೇಳುತ್ತೀನಿ ಎಂದಿದ್ದಾರೆ. ಆಕೆಗೆ ಪ್ರೊಟೋಕಾಲ್ ಕೊಟ್ಟವರ ಮಾಹಿತಿ ಸಂಗ್ರಹ ಮಾಡಿದ್ದೇವೆ. ಚಿನ್ನ ಎಲ್ಲಿಂದ ತಂದಿದ್ದಾರೆ? ಎಲ್ಲಿಟ್ಟು ತಂದಿದ್ದಾರೆ ಎಂಬುದು ಗೊತ್ತಿದೆ ಎಂದು ಯತ್ನಾಳ್‌ ಹೇಳಿದರು.

Home add -Advt

Related Articles

Back to top button