
ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ದೆಹಲಿಮಟ್ಟದಲ್ಲಿ ಹೈಕಮಾಂಡ್ ಅಂಗಳ ತಲುಪಿರುವಾಗಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ.
ಈ ಹಿಂದೆ ಶೋಕಾಸ್ ನೋಟಿಸ್ ನೀಡಿದ್ದರೂ ಮತ್ತೆ ಪಕ್ಷದ ನಿಯಮ ಉಲ್ಲಂಘನೆ ಮಾಡಿ ಬಹಿರಂಗ ಹೇಳಿಕೆಗಳನ್ನು ನೀಡಿತ್ತಿರುವ ಹಿನ್ನೆಲೆಯಲ್ಲಿ ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
72 ಗಂಟೆಗಳೊಳಗಾಗಿ ಉತ್ತರ ನೀಡಬೇಕು. ನಿಗದಿತ ಸಮಯದಲ್ಲಿ ಉತ್ತರ ನೀಡಿದಿದ್ದರೆ ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.