Belagavi NewsBelgaum NewsElection NewsKannada NewsKarnataka NewsNationalPolitics

*ಕಾಂಗ್ರೆಸ್ ಮುಖಂಡನ ಜೊತೆ ಯತ್ನಾಳ ಮೀಟಿಂಗ್*

ಪ್ರಗತಿವಾಹಿನಿ ಸುದ್ದಿ:  ಬಿಜೆಪಿಯಿಂದ ಉಚ್ಚಾಟಿಸಲ್ಪಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಹುಬ್ಬಳ್ಳಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್‌ ಕುಮಾರ್‌ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. 

ನಿನ್ನೆಯಷ್ಟೇ ಹೊಸ ಪಕ್ಷ ಕಟ್ಟುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದರು. ಜೊತೆಗೆ, ಮುಂದಿನ ವಿಜಯದ ದಶಮಿ ದಿನದಂದು ಪಕ್ಷದ ಘೋಷಣೆ ಮಾಡುವುದಾಗಿ ಹೇಳಿದ್ದರು.

ಈ ಘಟನೆಯ ಬೆನ್ನಲ್ಲೇ ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಸಮಾಲೋಚನೆ ನಡೆಸುತ್ತಿರುವುದು ಚರ್ಚೆಗೆ ಕಾರಣವಾಗಿದೆ. ಇಂದು ಹುಬ್ಬಳ್ಳಿಯಿಂದ  ಬಸನಗೌಡ ಪಾಟೀಲ್ ಯತ್ನಾಳ್ ಅವರು, ಕೊಪ್ಪಳಕ್ಕೆ ತೆರಳಿ ತಮ್ಮ ಬೆಂಬಲಿಗರೊಂದಿಗೆ ಚರ್ಚೆ ನಡೆಸಲಿದ್ದಾರೆ.

Home add -Advt

Related Articles

Back to top button