ಪ್ರಗತಿವಾಹಿನಿ ಸುದ್ದಿ, ಬೆಳಗಾವಿ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿರುವ 2020 -21ನೇ ಸಾಲಿನ ಆಯವ್ಯಯವನ್ನು ರಾಜ್ಯಸಭಾ ಸದಸ್ಯ, ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಶ್ಲಾಘಿಸಿದ್ದಾರೆ.
4ನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪ 7ನೇ ಬಾರಿ ಬಜೆಟ್ ಮಂಡಿಸಿದ್ದಾರೆ. ಪ್ರತಿ ಬಾರಿಯೂ ವೈಶಿಷ್ಠ್ಯ ಪೂರ್ಣವಾಗಿ ಬಜೆಟ್ ಮಂಡಿಸುತ್ತ ಬಂದಿರುವ ಅವರು ಈ ಬಾರಿ ಸಮಾಜದ ಎಲ್ಲ ಕ್ಷೇತ್ರಗಳಿಗೂ ನ್ಯಾಯ ಒದಗಿಸುವ ಅಪರೂಪದ ಬಜೆಟ್ ಮಂಡಿಸಿದ್ದಾರೆ. ಕೃಷಿ ಕ್ಷೇತ್ರಕ್ಕೆ ಮತ್ತು ನೀರಾವರಿಗೆ ವಿಶೇಷ ಅನುದಾನ ಒದಗಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಪ್ರಭಾಕರ ಕೋರೆ ಹೇಳಿದ್ದಾರೆ.
ಮಹಿಳೆಯರ ಅಭಿವೃದ್ಧಿಗೆ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ, ಕೈಗಾರಿಕೆ ಕೌಶಲ್ಯ ಅಭಿವೃದ್ಧಿಗೆ, ಮಹದಾಯಿ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸಿದ್ದಾರೆ. ಒಟ್ಟಾರೆ ಎಲ್ಲ ವರ್ಗದ ಜನರೂ ಖುಷಿ ಪಡುವ ರೀತಿಯಲ್ಲಿ ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮಾದರಿಯಾದ ಬಜೆಟ್ ನ್ನು ಯಡಿಯೂರಪ್ಪ ಮಂಡಿಸಿದ್ದಾರೆ ಎಂದು ಅವರು ಪ್ರಶಂಸಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ