ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿಧಾನ ಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಇದರ ಬೆನ್ನಿಗೇ ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿ ಕರೆದಿರುವ ಯಡಿಯೂರಪ್ಪ ಯಾವ ವಿಷಯದ ಕುರಿತು ಮಾತನಾಡಲಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ. ಬೆಳಗ್ಗೆ 11 ಗಂಟೆಗೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ