Kannada NewsKarnataka News

ಯಡಿಯೂರಪ್ಪ ಬೆಂಗಾವಲು ವಾಹನ ಪಲ್ಟಿ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -2 ದಿನಗಳ ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಕ್ರಾಸ್ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಪಿಎಸ್ಐ, ಜೀಪ್ ಚಾಲಕ  ಗಾಯಗೊಂಡಿದ್ದಾರೆ.

ಇಂದು ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗಾವಿಯಿಂದ ಚಿಕ್ಕೋಡಿ, ರಾಯಬಾಗ ಮೂಲಕ ಅಥಣಿಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ರಾಯಬಾಗ ಸಮೀಪ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಕಬ್ಬಿನಗದ್ದೆಗೆ ಹೋಗಿ ಬಿದ್ದಿದೆ. ಗಾಯಾಳು ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ಗಾಯಾಳುಗಳ ದಾಖಲು ಮಾಡಲಾಗಿದೆ.

ರಸ್ತೆಗೆ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button