Latest

ಯಡಿಯೂರಪ್ಪ ಭಾನುವಾರ ತವರಿಗೆ: ಏನು ವಿಶೇಷ ಗೊತ್ತೆ?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 7 ತಿಂಗಳ ನಂತರ ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ.

ಫೆಬ್ರವರಿಯಲ್ಲಿ ತಮ್ಮ ಜನ್ಮದಿನ ಆಚರಣೆಗೆ ಯಡಿಯೂರಪ್ಪ ಶಿವಮೊಗ್ಗಕ್ಕೆ ಹೋಗಿದ್ದರು. ನಂತರ ಕೊರೋನಾ ಹಿನ್ನೆಲೆಯಲ್ಲಿ ಅವರು ಕಳೆದ 7 ತಿಂಗಳು ತವರು ಜಿಲ್ಲೆಗೆ ಹೋಗಿರಲಿಲ್ಲ. ಭಾನುವಾರ ಮಧ್ಯಾಹ್ನ 2 ಗಂಟೆಗೆ ಶಿಕಾರಿಪುರಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿಳಿಯಲಿದ್ದಾರೆ.

ಭಾನುವಾರ ತಮ್ಮ ಮನೆಯಲ್ಲೇ ವಾಸ್ತವ್ಯ ಹೂಡುವ ಅವರು 19 ಹಾಗೂ 20ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾಲ್ಗೊಂಡು 20ರಂದು ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button